ಎಲ್ಲರಿಗೂ ನಮಸ್ಕಾರ, ಪದವಿಯೊಂದಿಗೆ UPSC ತರಬೇತಿ (ಸಂಯೋಜಿತ ಪದವಿ) ನೀಡಲು ಆನ್‌ಲೈನ್ ಮೂಲಕ (Degree with UPSC Coaching Application) ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
2024-25 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯೊಂದಿಗೆ ಯು.ಪಿ.ಎಸ್.ಸಿ ತರಬೇತಿ ನೀಡಲಾಗುತ್ತದೆ.
12th ಪಾಸಾದ ವಿದ್ಯಾರ್ಥಿಗಳಿಗಾಗಿ ಬಿ.ಎ, ಬಿ.ಕಾಂ, ಬಿ.ಎಸ್ಸಿ ಪದವಿ ಅಧ್ಯಯನದೊಂದಿಗೆ ಯು.ಪಿ.ಎಸ್.ಸಿ ಸಂಯೋಜಿತ ಪದವಿ (Integrated Under Graduate Degree) ಕಾರ್ಯಕ್ರಮದ ಉದ್ದೇಶವಾಗಿದೆ. ಸಂಯೋಜಿತ ಪದವಿಯು ವಸತಿಯುತ ಕಾರ್ಯಕ್ರಮವಾಗಿರುವುದರಿಂದ ಊಟ/ವಸತಿಯೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುವುದು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 17 ವರ್ಷ ಪೂರೈಸಿರಬೇಕು.
Degree with UPSC Coaching ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು.
- 12th ಪಾಸಾಗಿರಬೇಕು.
ವಾರ್ಷಿಕ ಆದಾಯ:
ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯು ಎಲ್ಲಾ ಮೂಲಗಳಿಂದ 5 ಲಕ್ಷ ಮೀರಿರಬಾರದು.
ಆಯ್ಕೆ ವಿಧಾನ:
12 ನೇ ತರಗತಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-07-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: swdservices.karnataka.gov.in
ಇತರೆ ಮಾಹಿತಿಗಳನ್ನು ಓದಿ:
12,000 ರೂ. ಟಾಟಾ ವಿದ್ಯಾರ್ಥಿವೇತನ, ಅರ್ಹರು ಅರ್ಜಿ ಸಲ್ಲಿಸಿ
IDFC FIRST Bank Scholarship 2024
ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ, ಸರ್ಕಾರ ನೀಡಲಿದೆ ಈ ಹಣ