ಎಲ್ಲರಿಗೂ ನಮಸ್ಕಾರ, ಉಚಿತ ಹೊಲಿಗೆ ಯಂತ್ರ ತರಬೇತಿ ಪಡೆಯಬೇಕೆ..? Free Sewing Machine Training ಯಾರು ಅರ್ಜಿ ಸಲ್ಲಿಸಬಹುದು.? ಎಷ್ಟು ದಿನಗಳಲ್ಲಿ ಕಾಲ ತರಬೇತಿ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತ ಹೊಲಿಗೆ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು:
ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ಅರ್ಜಿದಾರು ಸಂಸ್ಥೆಯಿಂದ ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
ಗ್ರಾಮೀಣ ಪ್ರದೇಶದ BPL ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಅದ್ಯತೆ ನೀಡಲಾಗುತ್ತದೆ.
ತರಬೇತಿ ಅವಧಿ:
ಉಚಿತ ಹೊಲಿಗೆ ತರಬೇತಿಯನ್ನು 30 ದಿನಗಳವರೆಗೆ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿಗೆ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ. ತರಬೇತಿಯು ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ.
ರಾಜ್ಯ ಮತ್ತು ಕೇಂದ್ರ ಸರಕಾರದ ಯಾವ ಯಾವ ಯೋಜನೆಯಡಿಯಲ್ಲಿ ಸ್ವ-ಉದ್ಯೋಗವನ್ನು ಆರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬ ಮಾಹಿತಿಯನ್ನು ನೀಡುತ್ತಾರೆ.
Free Sewing Machine Training ಅಗತ್ಯ ದಾಖಲೆಗಳು:
ಆಧಾರ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಪಡಿತರ ಚೀಟಿ
ಮೊಬೈಲ್ ನಂಬರ್
Free Sewing Machine Training ಅರ್ಜಿ ಸಲ್ಲಿಸುವ ವಿಧಾನ:
ಉಚಿತ ಹೊಲಿಗೆ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು. ಈ ನಂಬರ್ ಗಳಿಗೆ 9449860007, 9538281989, 9916783825, 888044612
ಕರೆ ಮಾಡಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಬಹುದು.
ತರಬೇತಿ ದಿನಾಂಕ:
ಉಚಿತ ಹೋಲಿಗೆ ತರಬೇತಿ ದಿನಾಂಕ: 12-08-2024 ರಿಂದ ಆರಂಭವಾಗಿ 10-09-2024 ಕ್ಕೆ ಮುಕ್ತಾಯವಾಗಲಿದೆ.
ತರಬೇತಿ ನಡೆಯುವ ಸ್ಥಳ:
ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆ-581343
ಇತರೆ ಮಾಹಿತಿಗಳನ್ನು ಓದಿ: