Free Training: ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಉಚಿತ ಕೋಳಿ ಸಾಕಾಣಿಕೆ ಮಾಡಬಯಸುವವರಿಗರೆ ಗುಡ್ ನ್ಯೂಸ್. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ 10 ದಿನಗಳ ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ (Free Training) ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ವಯೋಮಿತಿ:
ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು.

ಗ್ರಾಮೀಣ ಭಾದದ ಅಭ್ಯರ್ಥಿಗಳಿಗೆ ಆದ್ಯತೆ ನೀಡುತ್ತಾರೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯವನ್ನು ನೀಡುತ್ತಾರೆ, ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ ಯುವಕ-ಯುವತಿಯರು ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ನಂಬರ್: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Free Training ಬೇಕಾಗುವ ದಾಖಲೆಗಳು:

ಆಧಾರ್ ಕಾರ್ಡ್
ಬಿಪಿಎಲ್ ರೇಷನ್ ಕಾರ್ಡ್

ಅರ್ಜಿ ಸಲ್ಲಿಸಲು ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02-07-2024

ಇತರೆ ಮಾಹಿತಿಗಳನ್ನು ಓದಿ:

3 ಲಕ್ಷ ರೂ. ಸಬ್ಸಿಡಿ ಮತ್ತು ಬಡ್ಡಿ ರಹಿತ ಸಾಲ ಸೌಲಭ್ಯ

ಗೃಹಲಕ್ಷ್ಮಿ DBT Status Check ಮಾಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

Leave a Comment

error: Content is protected !!