ಎಲ್ಲರಿಗೂ ನಮಸ್ಕಾರ, ನೀವು ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಬರುದಕ್ಕಾಗಿ ಕಾಯುತ್ತಿದ್ದೀರಾ..? ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂಬುದನ್ನು ಚೆಕ್ (Gruhalakshmi DBT Status Check) ಮಾಡಬೇಕೆ..? ಹೇಗೆ ಚೆಕ್ ಮಾಡಿಕೊಡಿಕೊಳ್ಳಬಹುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈ ಯೋಜನೆಯ ಮೂಲಕ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ. ಅನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿತ್ತಿದೆ. ಒಂದು ಕೋಟಿಗೂ ಅಧಿಕ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಆರ್ಥಿಕ ಸಭಲೀಕರಣಕ್ಕಾಗಿ ಜಾರಿಗೆ ತರಲಾಗಿದ್ದು\,. ಈ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಅರ್ಹ ಮನೆ ಯಜಮಾನಿಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನು ಸಂದಾಯ ಮಾಡಲಾಗುತ್ತಿದೆ.
ಮಂಡ್ಯದಲ್ಲಿ ಜರುಗಿದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಂತ್ರಿಕ ದೋಷದಿಂದ ಜೂನ್ ಹಾಗೂ ಜುಲೈ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಿಲ್ಲ, ಈಗ ಎಲ್ಲವೂ ಸರಿಯಾಗಿದೆ. 11 ನೇ ಕಂತಿನ ಮತ್ತು 12 ನೇ ಕಂತಿನ ಒಟ್ಟು 4,000 ರೂ. ಹಣವನ್ನು ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಎಂಬುದನ್ನು Gruhalakshmi DBT Status Check ಮಾಡಿಕೊಳ್ಳಬಹುದು. ಈ ಕೆಳಗೆ ನೀಡಲಾಗಿರುವ ಹಂತಗಳ ಮೂಲಕ Status ಚೆಕ್ ಮಾಡಿಕೊಳ್ಳಿ.
Gruhalakshmi DBT Status Check:
- ಹಂತ-1: ಮೊದಲು ಈ ಕೇಳಗೆ ಕೊಟ್ಟಿರುವ ಲಿಂಕ್ ಮೂಲಕ DBT Karnataka ಅಧಿಕೃತ App ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.
- ಹಂತ-2: App ಓಪನ್ ಮಾಡಬೇಕು. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ನಮೂದಿಸಬೇಕು. GET OTP ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಹಂತ-3: ಫಲಾನುಭವಿಯ ಆಧಾರಗೆ ಲಿಂಕ್ ಇರುವ ಮೊಬೈಲ್ ಸಂಖ್ಯಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ನಂಬರ್ ನ OTP ಎಂಟರ್ ಮಾಡಿ. Verify OTP ಬಟನ್ ಮೇಲೆ ಕ್ಲಿಕ್ ಮಾಡಿ.
- ಹಂತ-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್ ಎಂಟರ್ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್ ಇರುವ ಮೊಬೈಲ್ ನಂಬರ್ ನಮೂದಿಸಿ. OK ಬಟನ್ ಮೇಲೆ ಕ್ಲಿಕ್ ಮಾಡಿಬೇಕು.
- ಹಂತ-5: ನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ನಂಬರ್ ನ mPIN ಎಂಟರ್ ಮಾಡಿ. Submit ಬಟನ್ ಮೇಲೆ ಕ್ಲಿಕ್ ಮಾಡಿ.
- ಹಂತ-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.
- ಹಂತ-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್ ಮಾಡಿ. LOGIN ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ಹಂತ-8: ಮೊದಲನೇ ಆಯ್ಕೆ Payment Status ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಹಂತ-9: ಅಲ್ಲಿ Gruhalakshmi DBT Status Check ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ಹಂತ-10: ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ, ಯಾವ ದಿನಾಂಕದಂದು ಹಣ ಸಂದಾಯವಾಗಿದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.
Gruhalakshmi Scheme DBT Status Check Link:
DBT Karnataka App: Download ಮಾಡಿ
ಇದೆ ರೀತಿಯ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮೀ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ
ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ