ಎಲ್ಲರಿಗೂ ನಮಸ್ಕಾರ, ನಿಮಗೆ ತಿಳಿದಿರುವಂತೆ ಜೂನ್ ತಿಂಗಳ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಹಣ ಜಮಾ ಆಗಿಲ್ಲ. ಎರಡು ತಿಂಗಳ ದುಡ್ಡು ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ..? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಅನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಮಹಿಳೆಯರಿಗೆ ಈ ಯೋಜನೆಯಿಂದ ಸಾಕಷ್ಟು ಪ್ರಯೋಜನವಾಗಿದ್ದು ಗೃಹಲಕ್ಷ್ಮೀ ಯೋಜನೆಯ ಹಣದಿಂದ ಚಿನ್ನ ಸೇರಿದಂತೆ ಹಲವಾರು ಅಗತ್ಯ ವಸ್ತುಗಳನ್ನು ಖರೀದಿಸಿದ್ದಾರೆ.
Gruhalakshmi Scheme 11th and 12th Installment Amount:
ಗೃಹಲಕ್ಷ್ಮಿ ಯೋಜನೆಯ 11 ಮತ್ತು 12 ನೇ ಕಂತಿನ 4000 ರೂ. ಹಣವು ಯಾವಾಗ ಜಮಾ ಆಗಲಿದೆ ಎಂದು ಫಲಾನುಭವಿಗಳ ಕಾಯುತ್ತಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ಅರ್ಹ ಮನೆ ಯಜಮಾನಿಯರ ಖಾತೆಗಳಿಗೆ ನೇರವಾಗಿ ಜಮಾ ಆಗಲಿದೆ.
ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ವರ್ಗಾವಣೆಯಾದ ಕಾರಣ ಸಾಕಷ್ಟು ಟೀಕೆಗೆ ಗುರಿಯಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15 ರೊಳಗೆ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಿದರು ಇನ್ನುವರೆಗೂ ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮಾ ಆಗಿಲ್ಲ ಅಂತವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಆಗಿದೇಯಾ ಎಂಬುದನ್ನು ಚೆಕ್ ಮಾಡಿಸಿಕೊಳ್ಳಿ. ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು.
ನಿಮ್ಮ ರೇಷನ್ ಕಾರ್ಡ್ ನಲ್ಲಿ ಹಾಗೂ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಹೆಸರು ಹೊಂದಾಣಿಕೆ ಆಗುತ್ತಿದೇಯಾ ಆದನ್ನು ಕೂಡ ನೋಡಿ. ಈ ಸಮಸ್ಯೆಗಳನ್ನು ಪರಿಹರಿಸಿಕೊಂಡಲ್ಲಿ ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಮಾಡುತ್ತಾರೆ.
ನಿಮ್ಮ ಖಾತೆಗೆ ಜಮಾ ಆಗಿದೇಯೆ ಎಂಬುದನ್ನು ಗೃಹಲಕ್ಷ್ಮಿ DBT Status Check ಮಾಡಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ:
ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ