ಎಲ್ಲರಿಗೂ ನಮಸ್ಕಾರ, ನೀಮಗೆಲ್ಲಾ ತಿಳಿದಿರುವಂತೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಜನರ ಕಲ್ಯಾನಕ್ಕಾಗಿ ಐದು ಗ್ಯಾರಂಟಿ ಯೋಜನೆ (Guarantee Schemes) ಗಳನ್ನು ಜಾರಿಗೆ ತಂದಿದ್ದರು. ಆದರೆ ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕೆ ಹಿನ್ನಡೆಯಾಗಿದ್ದು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಲ್ಲಿಸುತ್ತಾರಾ ಎಂಬ ಗೊಂದಲ ಜನರಲ್ಲಿ ಉಂಟಾಗಿದೆ.
ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗದ ಕಾರಣ ನಮಗೆ ಮತ ಹಾಕಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲಾಗುತ್ತದೆ ಎಂಬ ಮಾತುಗಳು ಜನರಲ್ಲಿ ಕೇಳಿಬರುತ್ತಿದೆ.
Guarantee Schemes New Update:
ಇದರ ಬೆನ್ನಲ್ಲೇ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಈ ವಿಷಯದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲವೆಂದು ಈಗಾಗಲೇ ಸರ್ಕಾರ ತಿರ್ಮಾನಿಸಿದೆ.
ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸುತ್ತದೆ ಎಂದು ಪ್ರತಿಪಕ್ಷದವರು ಸುಳ್ಳು ಸುದ್ದಿ ಹಬ್ಬಿಸಿದರು. ಇದಕ್ಕೆ ಚುನಾವಣೆ ಸಂದರ್ಭದಲ್ಲಿಯೇ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಸೇರಿದಂತೆ ನಾವೆಲ್ಲ ಸ್ಪಷ್ಟಪಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಕ್ಕೂ ಮೊದಲೆ ಬಹಳಷ್ಟು ಚರ್ಚೆ ಮಾಡಿದ್ದೇವೆ. ನಮ್ಮ ಉದ್ದೇಶ ಬಡತನ ನಿರ್ಮೂಲನೆ ಮಾಡುವುದು. ಹಳ್ಳಿಗಳಲ್ಲಿ ಜನರು ಹಾಗೂ ಕೂಲಿ ಕಾರ್ಮಿಕರು ತೊಂದರೆಯಲ್ಲಿದ್ದಾರೆ. ಜನರ ಕಲ್ಯಾನಕ್ಕಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.
ಬಡವರಿಗಾಗಿ ಗೃಹಲಕ್ಷ್ಮೀ ಯೋಜನೆ, ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆ ಸೇರಿ ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ನಮ್ಮ ಚುನಾವಣಾ ಪ್ರಣಾಳಿಕೆಯನ್ನು ತಿಳಿಸಲಾಗಿತ್ತು.
ಅದರಂತೆ ನಾವು ಅಧಿಕಾರಕ್ಕೆ ಬಂದ ನಂತರ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂಬ ತೀರ್ಮಾನ ಮಾಡಿಕೊಂಡಿದ್ದೇವೆ.
ಯಾರು ಏನೆ ಹೇಳಿದರು ಸಹ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಈಗಾಗಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದರಿಂದ ಒಂದಷ್ಟು ಹಣಕಾಸಿನ ಸಮಸ್ಯೆ ಉಂಟಾಗಿದೆ ಎಂಬುದು ಎಲ್ಲರಿಗೆ ತಿಳಿದಿರುವ ವಿಷಯ. ಈ ರೀತಿ ದೊಡ್ಡ ಮಟ್ಟದ ಹಣ ಖರ್ಚಾಗುವುದರಿಂದ ಮರು ಹೊಂದಿಕೆ ಮಾಡುವ ಅವಶ್ಯಕತೆ ಇರುತ್ತದೆ. ಈ ಕೆಲಸವನ್ನು ನಾವೇ ಮಾಡುತ್ತೇವೆ. ನಮಗೂ ತಿಳಿದಿದೆ.
ಜನರು ಹಸಿವಿನಿಂದಾಗಿ ಖಾಲಿ ಹೊಟ್ಟೆಯಲ್ಲಿದ್ದಾಗ, ಬೇರೆ ಯಾವ ಯೋಜನೆಗಳನ್ನು ಜಾರಿ ಮಾಡಿದರು ಉಪಯೋಗವಾಗುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ
ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಜಮಾ ಯಾವಾಗ..?
ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿ, ದುಪಟ್ಟು ಲಾಭ ನಿಮ್ಮದಾಗಿಸಿಕೊಳ್ಳಿ