ಎಲ್ಲರಿಗೂ ನಮಸ್ಕಾರ, ನೀವು ಕೂಡಾ ಸ್ಕಾಲರ್ಶಿಪ್ ಗೆ ಅರ್ಜಿಸಲ್ಲಿಸಬೇಕೆ..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ಸಿಗುತ್ತದೆ.? Infosys Foundation Scholarship ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ..? ಅರ್ಹತೆಗಳೇನು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಇನ್ಫೋಸಿಸ್ ಫೌಂಡೇಶನ್ ವತಿಯಿಂದ ಇನ್ಫೋಸಿಸ್ ಫೌಂಡೇಶನ್ STEM ಸ್ಟಾರ್ಸ್ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಾರೆ.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಹಾಗೂ ಗಣಿತ ವಿಷಯಗಳಲ್ಲಿ ಪದವಿಯನ್ನು ಪಡೆಯಲು ಬಯಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಈ ವಿದ್ಯಾರ್ಥಿವೇತನವು 4-ವರ್ಷದ STEM ಕೋರ್ಸ್‌ನಲ್ಲಿ ಅಧ್ಯಯನ ಮಾಡುವ ಮಹಿಳಾ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ. ವರೆಗೆ ಸ್ಕಾಲರ್ಶಿಪ್ ನೀಡುತ್ತಾರೆ.
Infosys Foundation Scholarship ಅರ್ಹತೆಗಳು:
- ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.
- ವಿದ್ಯಾರ್ಥಿಗಳು ತಮ್ಮ 4-ವರ್ಷದ ಪದವಿ ಕೋರ್ಸ್‌ಗಳಾದ ಇಂಜಿನಿಯರಿಂಗ್, ಮೆಡಿಸಿನ್ (MBBS), ಹಾಗೂ ಇತರೆ ಸಂಬಂಧಿತ STEM ಕ್ಷೇತ್ರಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ (NIRF ಮಾನ್ಯತೆ ಪಡೆದ) ಮೊದಲ ವರ್ಷದಲ್ಲಿ ದಾಖಲಾಗಬೇಕು.
- ಅಭ್ಯರ್ಥಿಗಳು ಗುರುತಿಸಲಾದ ಕಾಲೇಜುಗಳಿಗೆ ಪ್ರವೇಶ ಪಡೆದಿರಬೇಕು ಹಾಗೂ ಅವರ 12 th ಪಾಸಾಗಿರಬೇಕು.
- ಅರ್ಜಿದಾರರು ಕೆಳಗಿನ-ನಿರ್ದಿಷ್ಟ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಬೇಕು:
- ಕೋರ್ಸ್ ಪೂರ್ಣಗೊಳ್ಳುವವರೆಗೆ ಎಂಜಿನಿಯರಿಂಗ್ ಮತ್ತು ಸಂಬಂಧಿತ ಕೋರ್ಸ್‌ಗಳಲ್ಲಿ ಕನಿಷ್ಠ 7 CGPA.
- ಕೋರ್ಸ್ ಪೂರ್ಣಗೊಳ್ಳುವವರೆಗೆ ನಿರಂತರ ದಾಖಲಾತಿಗಾಗಿ MBBS ನಲ್ಲಿ ವರ್ಷಕ್ಕೆ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕು.
- ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯವು 8 ಲಕ್ಷ ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
- ಅಭ್ಯರ್ಥಿಗಳು ಇತರೆ ವಿದ್ಯಾರ್ಥಿವೇತನವನ್ನು ಪಡೆದಿರಬಾರದು.
ಪ್ರಯೋಜನಗಳು:
ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಾರೆ.
ಅಗತ್ಯ ದಾಖಲೆಗಳು:
- ಪಾಸ್‌ಪೋರ್ಟ್ ಗಾತ್ರದ ಪೋಟೋ.
- 12th ಮಾರ್ಕ್ಸ್ ಕಾರ್ಡ್ ಮತ್ತು JEE/CET/NEET ಅಂಕಪಟ್ಟಿಯೊಂದಿಗೆ ಉತ್ತೀರ್ಣ ಪ್ರಮಾಣಪತ್ರಗಳು.
- ಗುರುತಿನ ಪುರಾವೆ (ಆಧಾರ್ ಕಾರ್ಡ್/ವೋಟರ್ ಐಡಿ ಕಾರ್ಡ್/ಚಾಲನಾ ಪರವಾನಗಿ/ಪ್ಯಾನ್ ಕಾರ್ಡ್).
- ಪ್ರಸ್ತುತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬನಫೈಡ್ ಪ್ರಮಾಣಪತ್ರ).
- ಕುಟುಂಬದ ಆದಾಯ ಪ್ರಮಾಣಪತ್ರ
- ಕಳೆದ 6 ತಿಂಗಳ ವಿದ್ಯುತ್ ಬಿಲ್‌ಗಳನ್ನು ಹೆಚ್ಚುವರಿ ಪೋಷಕ ದಾಖಲೆಯಾಗಿ ಒದಗಿಸಬೇಕು.
- ಬ್ಯಾಂಕ್ ಪಾಸ್ ಬುಕ್ (ಬ್ಯಾಂಕ್ ಪಾಸ್‌ಬುಕ್/ರದ್ದಾದ ಚೆಕ್)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-11-2024
ಪ್ರಮುಖ ಲಿಂಕ್’ಗಳು:
Infosys Foundation Scholarship Application ಲಿಂಕ್: Apply ಮಾಡಿ
ಇತರೆ ಮಾಹಿತಿಗಳನ್ನು ಓದಿ: