ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರವು ಶೈಕ್ಷಣಿಕ ಧನ ಸಹಾಯದವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು Karnataka Labour Card Scholarship 2024 ಧನ ಸಹಾಯವು ಅನುಕೂಲವಾಗುತ್ತದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಯಾವೇಲ್ಲ ಅಗತ್ಯ ದಾಖಲೆಗಳು ಬೇಕಾಗುತ್ತವೆ ಹಾಗೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಧನ ಸಹಾಯ ಸಿಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Karnataka Labour Card Scholarship 2024:
ಕರ್ನಾಟಕ ಸರ್ಕಾರವು ಜನರ ಕಲ್ಯಾನಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕಲಿಕಾ ಭಾಗ್ಯ (Kalika Bhagya Scholarship) ಯೋಜನೆಯ ಮೂಲಕ ಶೈಕ್ಷಣಿಕ ಧನ ಸಹಾಯವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ವಿದ್ಯಾಭ್ಯಾಸವನ್ನು ಮುಂದುವರೆಸಲು ನೇರವಾಗುತ್ತೀದೆ.
ಕಲಿಕಾ ಭಾಗ್ಯ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕೆ? ನೀವು ನೊಂದಾಯಿತ ಕಟ್ಟಡ ಕಾರ್ಮಿಕರೆ? ಹಾಗಿದ್ದರೆ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಓದಿರಿ. ಈ ಯೋಜನೆಯ ಲಾಭ ಪಡೆದುಕೊಳ್ಳಿ.
ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಧನ ಸಹಾಯವನ್ನ ಪಡೆದುಕೊಳ್ಳಬಹುದು.
ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP) ದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. 2023-24 ನೇ ಸಾಲಿಗಾಗಿ ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
Labour Department Scholarship 2024 ಅಗತ್ಯ ದಾಖಲೆಗಳು:
- ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
- ನೋಂದಣಿದಾರರು ಮತ್ತು ಅವರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
- ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ
- ಸ್ಪೂಡೆಂಟ್ ಐಡಿ
- ವ್ಯಾಸಂಗ ಪ್ರಮಾಣ ಪತ್ರ
- ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಯನ್ನು ಒದಗಿಸಿ ಕಲಿಕಾ ಭಾಗ್ಯ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-06-2024
Labour Department Scholarship 2024 ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: Apply ಮಾಡಿ
ಅಧಿಕೃತ ವೆಬ್‌ಸೈಟ್‌ಗಳು: karbwwb.karnataka.gov.in, ssp.postmatric.karnataka.gov.in
ಇದೆ ರೀತಿಯ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ.
ಇತರೆ ಮಾಹಿತಿಗಳನ್ನು ಓದಿ:
12,000 ರೂ. ಟಾಟಾ ವಿದ್ಯಾರ್ಥಿವೇತನ 2024
SSP Post Matric Scholarship 2024
ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ, ಸರ್ಕಾರ ನೀಡಲಿದೆ ಈ ಹಣ
ವಿದ್ಯಾರ್ಥಿವೇತನಕ್ಕೆ ಅರ್ಹರು ಅರ್ಜಿ ಸಲ್ಲಿಸಿ, ಹಣಕಾಸು ನೆರವು ಪಡೆಯಿರಿ
2 thoughts on “ಲೇಬರ್ ಕಾರ್ಡ್ ವಿದ್ಯಾರ್ಥಿವೇತನ 2024, ಅರ್ಜಿ ಸಲ್ಲಿಸಿ | Karnataka Labour Card Scholarship 2024 Apply Online @ssp.postmatric.karnataka.gov.in”