ಎಲ್ಲರಿಗೂ ನಮಸ್ಕಾರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, IAS/KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ (KAS IAS Free Coaching) ಉಚಿತ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
IAS ಹಾಗೂ KAS ಕೋಚಿಂಗ್ ಗೆ ಯಾರು ಅರ್ಜಿ ಸಲ್ಲಿಸಬಹುದು, ಅರ್ಹತೆಗಳೆನು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
2024-25 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ IAS/KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲು ಉದ್ದೇಶಿಸಲಾಗಿದೆ.
ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಸಮುದಾಯಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್ ಮತ್ತು ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಹಾಗೂ ಅವರ ಸುರಕ್ಷತಾ ಹಿತದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಿ ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲ ಆಗುವಂತೆ ಬೆಂಗಳೂರು ನಗರದಲ್ಲಿ ನಿರ್ಮಿಸಲಾಗಿರುವ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತವಾಗಿ IAS ಮತ್ತು KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದೆ.
KAS IAS Free Coaching 2024 ಅರ್ಹತೆಗಳು:
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- ಅಲ್ಪಸಂಖ್ಯಾತರ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಕ್ಕೆ ಸೇರಿದವರಾಗಿರಬೇಕು.
- ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
- ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ)
- ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2024
KAS IAS Free Coaching ಪ್ರಮುಖ ಲಿಂಕ್’ಗಳು:
ಪ್ರಕಟಣೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sevasindhu.karnataka.gov.in, dom.karnataka.gov.in
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು.
ಇತರೆ ಮಾಹಿತಿಗಳನ್ನು ಓದಿ:
LIC ನೇಮಕಾತಿ 2024, ಅರ್ಜಿ ಸಲ್ಲಿಸಿ
SC ST Degree with UPSC Coaching Application 2024