ಭಾರಿ ಮಳೆಯಿಂದಾಗಿ ಜನರ ಜೀವನವು ಸಂಕಷ್ಟಕ್ಕೆ ಸಿಲುಕಿದ್ದು, ಜನರ ಜೀವನವು ಅಸ್ತವ್ಯಸ್ತವಾಗಿದೆ. ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ (Rain Alert in Karnataka) ಎಂದು ಹವಾಮಾನ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ಆರೆಂಜ್, ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಿಗೆ ಆಗಸ್ಟ್ 6 ರವರೆಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು ಹವಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಈ ಕೆಳಗಿನ ಜಿಲ್ಲೆಗಳಿಗೆ ಆರೆಂಜ್, ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Rain Alert: ಆರೆಂಜ್ ಅಲರ್ಟ್ ಘೋಷಿಸಿದ ಜಿಲ್ಲೆಗಳು:
- ಉಡುಪಿ
- ಉತ್ತರ ಕನ್ನಡ
- ದಕ್ಷಿಣ ಕನ್ನಡ
ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ ಜಿಲ್ಲೆಗಳು:
- ಬೆಳಗಾವಿ
- ಶಿವಮೊಗ್ಗ
- ಚಿಕ್ಕಮಗಳೂರು
ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದ್ದು, ಕರಾವಳಿಯಲ್ಲಿ ಬಿರುಗಾಳಿಯ ಹವಾಮಾನವಿರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿನೆ ನೀಡಿದೆ.
ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆ ಆಗಸ್ಟ್ 6 ರವರೆಗೆ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.
ಇತರೆ ಮಾಹಿತಿಗಳನ್ನು ಓದಿ:
ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ