Vasati Yojane: ವಸತಿ ಯೋಜನೆ; ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಿಎಂ ಸಮ್ಮತಿ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ (Vasati Yojane) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಒಂದು ಲಕ್ಷ ಮನೆ ಯೋಜನೆ ಅಡಿಯಲ್ಲಿ ಆಯ್ಕೆಯಾದ ಕುಟುಂಬಗಳು ಕಟ್ಟಬೇಕಿದ್ದ 1 ಲಕ್ಷ ರೂ. ವಂತಿಗೆಯನ್ನು ಸರ್ಕಾರವೇ ಭರಿಸಲಿದೆ ಎಂದು ವಸತಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ಅವರು ತಿಳಿಸಿದ್ದಾರೆ.

Vasati Yojane In Karnataka:

ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿಯಲ್ಲಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ ₹1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ ವಂತಿಕೆಯ ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ.

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಗೆ (Vasati Yojane) 2017 ರ ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರಕಾರ 1.50 ಲಕ್ಷ ರೂ., ರಾಜ್ಯ ಸರಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ. SC- ST ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು.

ನಂತರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಘಟಕ ವೆಚ್ಚ 10.60 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. GST ಸೇರಿ 11.20 ಲಕ್ಷ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.

ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ, SC- ST ವರ್ಗ 6.70 ಲಕ್ಷರೂ. ಕಟ್ಟಬೇಕಾಗುತ್ತದೆ. ಈ ಹಿಂದೆ ಕ್ರಮವಾಗಿ 8.50 ಲಕ್ಷ ರೂ. ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು.

ಈ ತೀರ್ಮಾನ 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ ಲೈನ್ ಅರ್ಜಿ ಗಳಿಗೆ ಅನ್ವಯವಾಗುವುದಿಲ್ಲ ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಸ್ಪಷ್ಟಪಡಿಸಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

ಗೃಹಲಕ್ಷ್ಮೀ ಯೋಜನೆ

Leave a Comment

error: Content is protected !!