Yeshasvini Card Scheme 2024: ಯಶಸ್ವಿನಿ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್, 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನಿಮ್ಮ ಬಳಿ ಯಶಸ್ವಿನಿ ಕಾರ್ಡ್ ಇದೆಯೇ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಯಶಸ್ವಿನಿ ಕಾರ್ಡ್ (Yeshasvini Card Scheme) ಹೊಂದಿದವರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದ್ದು, ಫಲಾನುಭವಿಗಳಿಗೆ ಇದು ಅನುಕೂಲವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ.

ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯ (Yeshasvini Scheme) ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು.

ಇದರಿಂದಾಗಿ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಮನಗಂಡು ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು ಶೇ 300 ರವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370 ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ.

Yeshasvini Card Scheme: ಪ್ರಯೋಜನಗಳು

ಈ ಯೋಜನೆಯಡಿ (Yashaswini Scheme) 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್‌ವರ್ಕ್‌ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.

ಯಶಸ್ವಿನಿ ಯೋಜನೆಯಡಿಯೂ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಯೋಜನೆಯಡಿ ವ್ಯಕ್ತಿಯು ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭ ಸಾಧ್ಯವಾಗಲಿದೆ.

5 ಲಕ್ಷ. ಹೃದಯ ಶಸ್ತ್ರಚಿಕಿತ್ಸೆ, ಮೂಳೆ ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಶಾಸ್ತ್ರ, ಮತ್ತು ಇನ್ನೂ ಹೆಚ್ಚಿನವು ಸೇರಿದಂತೆ 800 ಕ್ಕೂ ಹೆಚ್ಚು ವೈದ್ಯಕೀಯ ಕಾರ್ಯವಿಧಾನಗಳಿಗೆ ಕವರೇಜ್. ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ನಗದು ರಹಿತ ಕ್ಲೈಮ್ ಸೌಲಭ್ಯ, ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಫಲಾನುಭವಿಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ.

ಇತರೆ ಮಾಹಿತಿಗಳನ್ನು ಓದಿ:

ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಸ ಅಪ್‌ಡೇಟ್

ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿ, ದುಪಟ್ಟು ಲಾಭ ನಿಮ್ಮದಾಗಿಸಿಕೊಳ್ಳಿ

ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಜಮಾ ಯಾವಾಗ..?

ಬೆಳೆ ಪರಿಹಾರ ಜಮಾ ಮೊಬೈಲ್‌ನಲ್ಲೇ Status Check ಮಾಡಿ

ಅನ್ನಭಾಗ್ಯ ಹಣ ನಿಮಗೆ ಜಮಾ ಆಗಿಲ್ಲವೇ?, ಇಲ್ಲಿದೆ ಹೊಸ Update

Leave a Comment

error: Content is protected !!